ವಿಜಯನಗರ:ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕರ್ತವ್ಯದಿಂದ ಮರಳಿದ್ದ ಕೃಷ್ಣಪ್ಪ ಪಟ್ಟಣದಲ್ಲಿರುವ ತಮ್ಮ ತೋಟಕ್ಕೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೃಷ್ಣಪ್ಪ ಕರ್ತವ್ಯದ ಒತ್ತಡದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.
ಕರ್ತವ್ಯದ ಒತ್ತಡ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ ಹೆಡ್ ಕಾನ್ಸ್ಟೇಬಲ್ - ಕರ್ತವ್ಯದ ಒತ್ತಡದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನ
ಕರ್ತವ್ಯದ ಒತ್ತಡದ ಹಿನ್ನೆಲೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರದ ಹೂವಿನಹಡಗಲಿ ಕೇಳಿಬಂದಿದೆ.
![ಕರ್ತವ್ಯದ ಒತ್ತಡ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ ಹೆಡ್ ಕಾನ್ಸ್ಟೇಬಲ್ SUICIDE ATTEMPT](https://etvbharatimages.akamaized.net/etvbharat/prod-images/768-512-17286253-thumbnail-3x2-bng.jpg)
ಆತ್ಮಹತ್ಯೆಗೆ ಯತ್ನ
ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಗದಗ ಜಿಲ್ಲಾ ಆಸ್ಪತ್ರೆಗೆ ಕಳಿಸಿದ್ದಾರೆ. ಕಾನ್ಸ್ಟೇಬಲ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.