ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್ ಹೆಚ್.ಎಂ.ವೀರಭದ್ರಯ್ಯ(51) ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಕೊರೊನಾಗೆ ಹಿರೇಹಡಗಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್ ಬಲಿ - ಹೊಸಪೇಟೆ
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್ ಹೆಚ್.ಎಂ.ವೀರಭದ್ರಯ್ಯ(51) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೊರೊನಾಗೆ ಹಿರೇಹಡಗಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್ ಬಲಿ
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್.ಎಂ.ವೀರಭದ್ರಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಎರಡು ಮೂರು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್.ಎಂ.ವೀರಭದ್ರಯ್ಯ ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದವರು. ಅವರಿಗೆ ಪುತ್ರ, ಪುತ್ರಿ ಇದ್ದಾರೆ.