ಬಳ್ಳಾರಿ:ಕರ್ನಾಟಕ ರಾಜ್ಯದಲ್ಲಿ ಕೊರೊನಾ ಭೀತಿ ಎದುರಾದ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಭೀತಿ ಇಲ್ಲ : ಟ್ವೀಟ್ ಮೂಲಕ ಶ್ರೀರಾಮುಲು ಅಭಯ - ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನಲೆ: ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು . ರಾಜ್ಯದ ಎಲ್ಲ ಹಳ್ಳಿಗಳಲ್ಲಿ #COVID19 ಬಗ್ಗೆ ಅರಿವು ಮೂಡಿಸಲು ಸೂಚನಾ ಫಲಕ ಅಳವಡಿಸುವಂತೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಈವರೆಗೂ ಕೊರೊನಾ ವೈರಸ್ನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯಕ್ಕೆ ಬರುವ ಅನ್ಯದೇಶ ವಾಸಿಗಳನ್ನ ತಪಾಸಣೆ ಮಾಡಲಾಗುತ್ತಿದೆ. ಈವರೆಗೆ 72,542 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನ ವಿವಿಧ ಮಾಲ್ ಹಾಗೂ ಕ್ಲಬ್ಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಜಾಗೃತಿ ಮೂಡಿಸಲು ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಸೂಕ್ತ ನಿರ್ದೇಶನ ನೀಡಲಾಗಿದೆ. ರಾಜ್ಯದ ಎಲ್ಲ ಹಳ್ಳಿಗಳಲ್ಲಿ #COVID19 ಬಗ್ಗೆ ಅರಿವು ಮೂಡಿಸಲು ಸೂಚನಾ ಫಲಕ ಅಳವಡಿಸುವಂತೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ನಲ್ಲಿ ಶ್ರೀರಾಮುಲು ಘೋಷಿಸಿದ್ದಾರೆ.