ಬಳ್ಳಾರಿ:ಜಿಲ್ಲೆಯಾದ್ಯಂತ ಸುರಿದ ಮಹಾಮಳೆಗೆ ಜನ- ಜಾನುವಾರುಗಳ ಜೀವನ ಅಸ್ತವ್ಯಸ್ತಗೊಂಡಿದೆ. ಸಂಡೂರು ತಾಲೂಕಿನ ಕೆಲ ಸೇತುವೆಗಳು ಈ ಮಳೆಯ ನೀರಿನಿಂದ ಜಲಾವೃತಗೊಂಡಿದ್ದು, ಆ ಮಾರ್ಗದಲ್ಲಿನ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.
ಜಿಲ್ಲೆಯ ಸಂಡೂರು ತಾಲೂಕಿನ ನಾನಾ ಗ್ರಾಮಗಳಲ್ಲಿನ ಕಚ್ಚಾ ಮನೆಗಳಿಗೆ ಭಾರೀ ಪ್ರಮಾಣದ ಹಾನಿಯುಂಟಾಗಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿರೋದು ಬಿಟ್ಟರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಹಾಮಳೆಗೆ ಜಿಲ್ಲೆಯ ಸಂಡೂರು ಹೋಬಳಿಯಲ್ಲಿ 6 ಮನೆ, ಚೋರುನೂರು ಹೋಬಳಿಯಲ್ಲಿ 3 ಮನೆಗಳಿಗೆ ಹಾನಿ ಉಂಟಾಗಿದೆ. ಸೋವೆನಹಳ್ಳಿ ಗ್ರಾಮದ ಹನುಮಂತಪ್ಪ ಎಂಬುವರಿಗೆ ಸೇರಿದ ಎರಡು ಎಮ್ಮೆಗಳು ಮೃತಪಟ್ಟಿವೆ.