ಬಳ್ಳಾರಿ: ಧಾರಾಕಾರವಾಗಿ ಸುರಿದ ಮಳೆಯಿಂದ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿತ ಉಂಟಾಗಿ ಓರ್ವ ವೃದ್ಧ ಮೃತಪಟ್ಟಿದ್ದಾನೆ.
ಮರಿಯಮ್ಮನಹಳ್ಳಿಯಲ್ಲಿ ಮನೆ ಗೋಡೆ ಕುಸಿದು ವೃದ್ಧ ಸಾವು - Bellary District
ಮರಿಯಮ್ಮನಹಳ್ಳಿ ಸಮೀಪದ ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಚಾಲಕ ಸೇರಿ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳು ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದಲೂ ಜಿಲ್ಲಾದ್ಯಂತ ಸುರಿದ ವಿಪರೀತ ಮಳೆಯಿಂದಾಗಿ ಕಚ್ಚಾ ಮನೆ ಕುಸಿತವಾಗಿದ್ದು, ವೃದ್ಧ ಹೆಚ್.ದ್ಯಾಮಜ್ಜ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಳ್ಳಾರಿ ತಾಲೂಕಿನ ಗೆಣಕಿಹಾಳ್ ಬಳಿ ಜಮೀನುಗಳು ಜಲಾವೃತಗೊಂಡಿವೆ. ಗ್ರಾಮಕ್ಕೆ ತೆರಳುವ ಸೇತುವೆ ಸಂಪರ್ಕ ಕಡಿತಗೊಂಡಿದೆ. ಒಳಚರಂಡಿ ನೀರು ರಸ್ತೆಗೆ ಹರಿದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನುಮರಿಯಮ್ಮನಹಳ್ಳಿ ಸಮೀಪದ ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಚಾಲಕ ಸೇರಿ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳು ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.