ಬಳ್ಳಾರಿ: ಜಿಲ್ಲೆಯಲ್ಲಿ ವರುಣನ ಅರ್ಭಟ ಮುಂದುವರೆದಿದ್ದು, ಸಂಡೂರು, ಹೊಸಪೇಟೆ ಹಾಗೂ ಕೂಡ್ಲಿಗಿ ತಾಲೂಕುಗಳಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ.
ಬಳ್ಳಾರಿ ಜಿಲ್ಲೆಯಾದ್ಯಂತ ಭಾರೀ ಮಳೆ: ಮಣ್ಣಿನಲ್ಲಿ ಸಿಲುಕಿದ ಅದಿರು ಸಾಗಣೆ ಲಾರಿಗಳು - Rain in Sandooru of Bellary
ಬಳ್ಳಾರಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಅದಿರು ಸಾಗಾಟದ ಲಾರಿಗಳು ಮಣ್ಣಿನಲ್ಲಿ ಹೂತು ಹೋಗಿವೆ.
ಮಣ್ಣಿನಡಿ ಸಿಲುಕಿದ ಅದಿರು ಸಾಗಾಟ ಲಾರಿಗಳು
ಸಂಡೂರು ತಾಲೂಕಿನಲ್ಲಿ ಮಳೆಯಿಂದಾಗಿ ಅದಿರು ಸಾಗಣೆ ಮಾಡುವ ಲಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಮೈನಿಂಗ್ ಯಾರ್ಡ್ಗಳಲ್ಲಿ ಅದಿರು ತುಂಬಿಸಿಕೊಳ್ಳಲು ನಿಲ್ಲಿಸಿದ್ದ ಲಾರಿಗಳು ಅದಿರು ಮಣ್ಣಿನಲ್ಲಿ ಹೂತುಹೋಗಿವೆ. ಅವುಗಳನ್ನು ಹೊರತೆಗೆಯಲು ಮಾಲೀಕರು ಹರಸಾಹಸ ಪಡುತ್ತಿದ್ದಾರೆ.
ಇನ್ನುಳಿದಂತೆ ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.