ಕರ್ನಾಟಕ

karnataka

ETV Bharat / state

ರೋಗಲಕ್ಷಣ ಇಲ್ಲದ ಸೋಂಕಿತರಿಗೆ ಹೋಮ್​ ಕ್ವಾರಂಟೈನ್​ ಮಾಡಿ: ಡಿಸಿ ಸೂಚನೆ - Corona Latest News

ಆರೋಗ್ಯ ಸೇವೆ ಒದಗಿಸುವವರಿಗೆ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೊರೊನಾ ಸೋಂಕು ಉಂಟಾದಲ್ಲಿ ಅವರಿಗೆ ಸರ್ಕಾರಿ ದಂತ ಮಹಾವಿದ್ಯಾಲಯದ ಪ್ರತ್ಯೇಕ ವಾರ್ಡ್​​​​​​ನಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದ್ದಾರೆ.

Home Quarantine for those who don't have symptoms of corona: DC
‘ರೋಗಲಕ್ಷಣ ಇಲ್ಲದ ಸೋಂಕಿತರಿಗೆ ಹೋಮ್​ ಕ್ವಾರಂಟೈನ್​ ಮಾಡಿ’: ಡಿಸಿ ಸೂಚನೆ

By

Published : Jul 9, 2020, 8:26 PM IST

ಬಳ್ಳಾರಿ: ಸರ್ಕಾರದ ಹೊಸ ಆದೇಶದ ಅನ್ವಯರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಹೋಮ್​ ಕ್ವಾರಂಟೈನ್​​​ನಲ್ಲಿಡುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಕ್ರಮಕೈಗೊಳ್ಳಲಾಗುತ್ತಿದ್ದು, ಇದುವರೆಗೆ 22 ಜನರಿಗೆ ಹೋಮ್​​ ಕ್ವಾರಂಟೈನ್​​​ನಲ್ಲಿಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್​​ಫೋರ್ಸ್​​ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೋಮ್​​ ಕ್ವಾರಂಟೈನ್​​​​ನಲ್ಲಿರುವವರ ಮೇಲೂ ನಿಗಾಯಿಡಲಾಗುತ್ತದೆ. ರೋಗಲಕ್ಷಣಗಳಿಲ್ಲದ ಸೋಂಕಿತರ ಸಂಪೂರ್ಣ ಜವಾಬ್ದಾರಿಯನ್ನು ಕೇರ್​​​ ಟೇಕರ್ಸ್​​ಗೆ ವಹಿಸಲಾಗುತ್ತದೆ ಎಂದರು.

ಆರೋಗ್ಯ ಸೇವೆ ಒದಗಿಸುವವರಿಗೆ ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೊರೊನಾ ಸೋಂಕು ಉಂಟಾದಲ್ಲಿ ಅವರಿಗೆ ಸರ್ಕಾರಿ ದಂತ ಮಹಾವಿದ್ಯಾಲಯದ ಪ್ರತ್ಯೇಕ ವಾರ್ಡ್​​​​​​ನಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಂಟ್ಯಾಕ್ಟ್ ಟ್ರೇಸಿಂಗ್‍ಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಬದಲಿಗೆ ಬೇರೆ ಇಲಾಖೆಗಳ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ಕೊರೊನಾ ಸೋಂಕಿತರಿಗಾಗಿ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 20 ಬೆಡ್‍ಗಳ ಅಗತ್ಯ ವ್ಯವಸ್ಥೆ ಹಾಗೂ ಇನ್ನಿತರ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಕೆ. ನಿತೀಶ್, ಎಸ್​​ಪಿ ಸಿ.ಕೆ. ಬಾಬಾ ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ, ವಿಮ್ಸ್ ನಿರ್ದೇಶಕ ಡಾ. ದೇವಾನಂದ, ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಬಸರೆಡ್ಡಿ ಮತ್ತಿತರರು ಇದ್ದರು.

ABOUT THE AUTHOR

...view details