ಬಳ್ಳಾರಿ: ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಹಶೀಲ್ದಾರ್ ವಿಜಯಕುಮಾರ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ತಹಶೀಲ್ದಾರ್ ವಿರುದ್ಧ ಲಂಚದ ಆರೋಪ : ಅಮಾನತಿಗೆ ಆಗ್ರಹಿಸಿದ ರಾಷ್ಟ್ರ ಸಮಿತಿ ಅಧ್ಯಕ್ಷ

ಹೂವಿನ ಹಡಗಲಿ ತಾಲೂಕಿನಲ್ಲಿ ಉಮೇಶ ನಾಯ್ಕ ಎಂಬವರ ಮರಳು ಸಾಗಣೆ ಲಾರಿಯೊಂದನ್ನು ವಶಪಡಿಸಿಕೊಂಡಿದ್ದ ತಹಶೀಲ್ದಾರ್ ವಿಜಯ ಕುಮಾರ, ಲಾರಿ ಬಿಟ್ಟುಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಈ ಕುರಿತ ವಿಡಿಯೋ ತುಣುಕೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ತಹಶೀಲ್ದಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.