ಕರ್ನಾಟಕ

karnataka

ETV Bharat / state

ಕೊರೊನಾ ಹೆಸರಿನಲ್ಲಿ ಭ್ರಷ್ಟಾಚಾರ ಆರೋಪ: ತನಿಖೆಗೆ ಕಾಂಗ್ರೆಸ್​​ ಆಗ್ರಹ - ಹೊಸಪೇಟೆ ಮತ್ತು ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಕೊರೊನಾ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ‘ಜನಧ್ವನಿ’ ಎಂಬ ಅಭಿಯಾನದ ಮೂಲಕ ಆಗ್ರಹಿಸಿದರು.

Protest
Protest

By

Published : Aug 21, 2020, 11:05 AM IST

ಹೊಸಪೇಟೆ: ಕೊರೊನಾ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತನಿಖೆಗೆ ಒತ್ತಾಯಿಸಿ ಹೊಸಪೇಟೆ ಮತ್ತು ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರು ನಗರದ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀಧರ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಬಿಜೆಪಿ ಸರ್ಕಾರ ಜಾರಿಗೊಳಿಸಿದ ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾಮಿಕ ವಿರೋಧಿ, ಕೈಗಾರಿಕಾ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಬೇಕು. ಕೊರೊನಾ ನಿಯಂತ್ರಣದಲ್ಲಿ ನಡೆದ ವ್ಯಾಪಾಕ ಭ್ರಷ್ಟಾಚಾರದ ತನಿಖೆಯನ್ನು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ತನಿಖೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೋಮಪ್ಪ, ಮುಖಂಡರಾದ ವೆಂಕಟಾರಾವ್ ಘೋರ್ಪಡೆ, ನಿಂಬಗಲ್ ರಾಮಕೃಷ್ಣ ಇನ್ನಿತರರಿದ್ದರು.

ABOUT THE AUTHOR

...view details