ಹೊಸಪೇಟೆ:ತುಂಗಭದ್ರಾ ಹಿನ್ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಹೊಲ, ಗದ್ದೆಗಳ ರಸಗೊಬ್ಬರ, ಕಾರ್ಖಾನೆಗಳು ನದಿಗೆ ಬಿಡುವ ರಾಸಾಯನಿಕ ತ್ಯಾಜ್ಯದಿಂದ ಹಸಿರು ಬಣ್ಣ ಉತ್ಪತ್ತಿಯಾಗುತ್ತದೆ ಎಂದು ಪರಿಸರ ತಜ್ಞರು ತಿಳಿಸಿದ್ದಾರೆ.
ಹೊಸಪೇಟೆ: ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಹಿನ್ನೀರು - ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಹಿನ್ನೀರು
ನೀರು ಹಸಿರಾದಾಗ ಯಾರು ಸಹ ನೇರವಾಗಿ ನೀರು ಕುಡಿಯುವುದಕ್ಕೆ ಬಳಸಬಾರದು. ಅಷ್ಟೇ ಅಲ್ಲ, ಜಾನುವಾರುಗಳಿಗೂ ಕುಡಿಸಬಾರದು. ಇಂತಹ ಸಂದರ್ಭದಲ್ಲಿ ನೀರಿನಲ್ಲಿ ಈಜಾಡಿದರೆ ಚರ್ಮ ಕಾಯಿಲೆಗಳು ಬರುವ ಸಾಧ್ಯತೆಯೂ ಇರುತ್ತದೆ
ಸಯನೋ ಬ್ಯಾಕ್ಟಿರಿಯಾದಿಂದ ಬ್ಲೂ ಗ್ರೀನ್ ಆಗಿ ಉತ್ಪತ್ತಿಯಾಗುತ್ತದೆ. ತುಂಗಭದ್ರಾ ಜಲಾಶಯಕ್ಕೆ ಮಲೆನಾಡಿನಿಂದ ನೀರು ಹರಿದು ಬರುತ್ತದೆ. ಅಲ್ಲಿನ ಕಾಫಿ, ತೆಂಗು, ಅಡಿಕೆ ತೋಟಗಳಿಗೆ ಹೆಚ್ಚಿನ ರಾಸಾಯನಿಕ ಬಳಸಲಾಗುತ್ತದೆ. ಹೊಲ, ಗದ್ದೆಗಳಲ್ಲಿ ರಸಗೊಬ್ಬರ ಹಾಕಲಾಗುತ್ತದೆ. ಜಲಾಶಯದ ಸುತ್ತಮುತ್ತಲಿರುವ ಕಾರ್ಖಾನೆಗಳು ವಿಷಕಾರಕ ರಸಾಯನಿಕಗಳನ್ನು ನೇರವಾಗಿ ನದಿಗೆ ಬೀಡುತ್ತವೆ. ಎಲ್ಲವೂ ಸೇರಿಕೊಂಡು ಸಯಾನೋ ಬ್ಯಾಕ್ಟಿರಿಯಾಗಳು ಹುಟ್ಟಿಕೊಂಡು, ಇಡೀ ನೀರನ್ನು ಹಸಿರು ಬಣ್ಣಕ್ಕೆ ತಿರುಗಿಸುತ್ತವೆ’ ಎನ್ನುತ್ತಾರೆ ಪರಿಸರ ತಜ್ಞರು.
ಪರಿಸರ ತಜ್ಞ ಸಮದ್ ಕೊಟ್ಟೂರು ಮಾತನಾಡಿ, 'ನೀರು ಹಸಿರಾದಾಗ ಯಾರು ಸಹ ನೇರವಾಗಿ ನೀರು ಕುಡಿಯುವುದಕ್ಕೆ ಬಳಸಬಾರದು. ಅಷ್ಟೇ ಅಲ್ಲ, ಜಾನುವಾರುಗಳಿಗೂ ಕುಡಿಸಬಾರದು. ಇಂತಹ ಸಂದರ್ಭದಲ್ಲಿ ನೀರಿನಲ್ಲಿ ಈಜಾಡಿದರೆ ಚರ್ಮ ಕಾಯಿಲೆಗಳು ಬರುವ ಸಾಧ್ಯತೆಯೂ ಇರುತ್ತದೆ. ನೀರಿನ ಬಣ್ಣ ಸಹಜ ಸ್ಥಿತಿಗೆ ಬರುವವರೆಗೆ ಜನ ಎಚ್ಚರದಿಂದ ಇರಬೇಕು’ ಎಂದು ತಿಳಿಸಿದರು.