ಕರ್ನಾಟಕ

karnataka

ETV Bharat / state

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ರಿಲೀಸ್

ಧಾರಾಕಾರ ಮಳೆಯಿಂದಾಗಿ ತುಂಗಭದ್ರಾ ಜಲಾಶಯ ಅಪಾರದ ಮಟ್ಟ ಮೀರಿ ಹರಿಯುತ್ತಿದ್ದು, ಐದು ಕ್ರಸ್ಟ್​ಗೇಟ್​ಗಳ ಮೂಲಕ ನದಿಗೆ ನೀರು ರಿಲೀಸ್ ಮಾಡಲಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ರಿಲೀಸ್!
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ರಿಲೀಸ್!

By

Published : Jul 25, 2021, 1:30 PM IST

ಹೊಸಪೇಟೆ(ವಿಜಯನಗರ): ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಭದ್ರಾ ಜಲಾಶಯ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆ ಇಂದು ಬೆಳಗ್ಗೆ ಐದು ಕ್ರಸ್ಟ್ ಗೇಟ್​​ಗಳ ಮೂಲಕ ಎಂಟು ಸಾವಿರ ಕ್ಯೂಸೆಕ್​ಗೂ ಅಧಿಕ ನೀರನ್ನು ರಿಲೀಸ್ ಮಾಡಲಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ರಿಲೀಸ್!

ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ.ನಾಗಮೋಹನ್​, ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಬಳಿಕ ಗೇಟ್​ ಬಟನ್ ಒತ್ತುವ ಮೂಲಕ ನದಿಗೆ ನೀರು ಹರಿಸಲಾಯಿತು. ಸದ್ಯ ಜಲಾಶಯದಲ್ಲಿ 1628.15 ಅಡಿ ನೀರಿದ್ದು, 83.277 ಟಿಎಂಸಿ ನೀರು ಸಂಗ್ರಹವಾಗಿದೆ. ಕಾಲುವೆಗೆ 9,331 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಒಳ ಹರಿವಿನ ಪ್ರಮಾಣ ಗಂಟೆಯಿಂದ ಗಂಟೆಗೆ ಹೆಚ್ಚಾಗುತ್ತಿದ್ದು, ಮತ್ತಷ್ಟು ನೀರು ನದಿಗೆ ಹರಿಸುವ ಸಾಧ್ಯತೆಯಿದೆ. 33 ಕ್ರಸ್ಟ್ ಗೇಟ್​ಗಳ ಪೈಕಿ ಐದು ಗೇಟ್​ಗಳ ಮೂಲಕ ನೀರನ್ನು ಹರಿಸಲಾಗುತ್ತಿದೆ.

ಇದನ್ನೂ ಓದಿ: Video: ಪ್ರವಾಹ ಪರಿಸ್ಥಿತಿ.. ಮನೆಗಳ ಮೇಲೆ ಹತ್ತಿ ಜೀವ ಉಳಿಸಿಕೊಂಡ ಕಾರವಾರ ಮಂದಿ

ಈಗಾಗಲೇ ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ತುಂಗಭದ್ರಾ ಆಡಳಿತ ಮಂಡಳಿಯ ಎಂಜಿನಿಯರ್ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ABOUT THE AUTHOR

...view details