ಕರ್ನಾಟಕ

karnataka

ETV Bharat / state

ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪತಿ; ಬಳಿಕ ತಾನೂ ಆತ್ಮಹತ್ಯೆಗೆ ಶರಣು.. ಅನಾಥರಾದ ಐವರು ಮಕ್ಕಳು - ಕುಡುಗೋಲಿನಿಂದ ಹಲ್ಲೆ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಜಿಗೇನಹಳ್ಳಿ ಗ್ರಾಮದಲ್ಲಿ ಪತಿಯೇ ತನ್ನ ಪತ್ನಿಯನ್ನು ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

husband killed his wife in bellary
ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪತಿ

By

Published : Oct 28, 2022, 12:42 PM IST

ಬಳ್ಳಾರಿ: ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರೇಖಾ (30) ಪತಿಯಿಂದ ಕೊಲೆಯಾದ ಮಹಿಳೆ. ಕುಮಾರಸ್ವಾಮಿ (35) ಆತ್ಮಹತ್ಯೆಗೆ ಶರಣಾದ ಪತಿ. 12 ವರ್ಷದ ಹಿಂದೆ ರೇಖಾಳನ್ನ ಮದುವೆಯಾಗಿದ್ದ ಕುಮಾರಸ್ವಾಮಿಗೆ 5 ಜನ ಮಕ್ಕಳಿದ್ದಾರೆ. ಹಾಗಿದ್ದರೂ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಕುಮಾರಸ್ವಾಮಿ, ಜಿಗೇನಹಳ್ಳಿ ಗ್ರಾಮದ ಜಮೀನಿಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಕೂಡ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ:ಹೆಬ್ಬಗೋಡಿಯ ಮನೆಯಲ್ಲಿ ಮಹಿಳೆ ಕೊಲೆ; ಗಂಡನಿಂದಲೇ ಕೃತ್ಯ ಶಂಕೆ

ಈ ಕುರಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚೋರನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details