ಬಳ್ಳಾರಿ:ಜಿಲ್ಲೆಯ ಸಿರುಗುಪ್ಪ ತಾಲೂಕಿನ ವತ್ತು ಮುರಣಿ ಗ್ರಾಮದ ಮನೆಯೊಂದರಲ್ಲಿ ಪತ್ನಿಯ ಶೀಲ ಶಂಕಿಸಿ ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಪತ್ನಿಯ ಶೀಲ ಶಂಕಿಸಿ ಕೊಡಲಿಯಿಂದ ಕೊಚ್ಚಿ ಹಾಕಿದ ಪತಿರಾಯ ! - ಪತಿ ವೀರಭದ್ರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ
ಶೀಲ ಶಂಕಿಸಿ ಪತ್ನಿಯನ್ನ ಪತಿಯೇ ಕೊಡಲಿಯಿಂದ ಕೊಚ್ಚಿ ಹಾಕಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ವತ್ತು ಮುರಣಿ ಗ್ರಾಮದಲ್ಲಿ ನಡೆದಿದೆ.
ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪತಿರಾಯ
ವತ್ತು ಮುರಣಿ ಗ್ರಾಮದ ನಿವಾಸಿ ಅರುಣಾ ಕೊಲೆಗೀಡಾದ ಮಹಿಳೆ ಆಗಿದ್ದಾರೆ. ಪತ್ನಿ ಹತ್ಯೆ ಮಾಡಿದ ಬಳಿಕ ಪತಿ ವೀರಭದ್ರ (34) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮನೆಯಲ್ಲಿ ಪತ್ನಿ ಅರುಣಾ ಮತ್ತು ಪತಿ ವೀರಭದ್ರ ಜಗಳವಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ, ಇದೇ ಸಿಟ್ಟಿನಲ್ಲಿ ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ಈ ಕುರಿತು ಹಚ್ಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ವೀರಭದ್ರನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.