ಹೊಸಪೇಟೆ:ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚಿಸುವಾಗ ನನಗೂ ಕರೆ ಬಂದಿತ್ತು ಎಂದು ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ ಹೇಳಿದ್ದಾರೆ.
ನಗರದಲ್ಲಿ ಖಾಸಗಿ ಹೋಟೆಲ್ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಬಿಜೆಪಿಗೆ ಹೋಗಿದ್ದರೆ ಈಗ ಸಚಿವನಾಗಿರುತ್ತಿದ್ದೆ. ಸಿದ್ದರಾಮಯ್ಯನವರ ಮುಖ ನೋಡಿಕೊಂಡು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆದೆ ಎಂದರು.