ಬಳ್ಳಾರಿ:ಜಿ. ಪರಮೇಶ್ವರ್ ಮಾಲೀಕತ್ವದ ಸಿದ್ಧಾರ್ಥ ವಿದ್ಯಾಸಂಸ್ಥೆಯಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತವಲ್ಲವೆಂದು ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಮುಜುಗರವನ್ನುಂಟು ಮಾಡಿದ್ದಾರೆ.
ಹರಗಿನಡೋಣಿ ಗ್ರಾಮದ ಕುಡಿಯುವ ನೀರಿನ ಕೆರೆ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳ ದಾಳಿಯನ್ನು ನಾನು ರಾಜಕೀಯಕ್ಕೆ ಬಳಸಿಕೊಳ್ಳಲ್ಲ. ಕಾಂಗ್ರೆಸ್ಸಿನ ಹಿರಿಯ ನಾಯಕ ಜಿ. ಪರಮೇಶ್ವರ್ ಅವರು ಸಮರ್ಥರಿದ್ದಾರೆ. ಅದನ್ನು ನಿಭಾಯಿಸುವ ಶಕ್ತಿ ಅವರಲ್ಲಿದೆ ಎಂದರು.