ಕರ್ನಾಟಕ

karnataka

ETV Bharat / state

ಮೀಸಲಾತಿ ಹೆಚ್ಚಳ ಘೋಷಣೆ.. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ - ಮೀಸಲಾತಿ ಹೆಚ್ಚಳ ಘೋಷಣೆ

ಎಸ್​ಸಿ, ಎಸ್ಟಿ ಸಮಯದಾಯಕ್ಕೆ ಸಚಿವ ಶ್ರೀರಾಮುಲು ಕೊಟ್ಟ ಮಾತಿನಂತೆ ಮೀಸಲಾತಿ ಕೊಡಿಸಿದ್ದಾರೆ. ಶ್ರೀರಾಮುಲು ಮಾತು ಕೊಟ್ರೆ ಅದು ಶ್ರೀರಾಮ ಮಾತು ಕೊಟ್ಟಂತೆ ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.

Increase in reservation.. celebrated by distributing sweets
ಮೀಸಲಾತಿ ಹೆಚ್ಚಳ.. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ

By

Published : Oct 8, 2022, 5:04 PM IST

ಬಳ್ಳಾರಿ/ವಿಜಯನಗರ: ಎಸ್‌ಸಿ, ಎಸ್‌ಟಿ ಸಮುದಾಯ ಮೀಸಲಾತಿ ಹೆಚ್ಚಳ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ವಿಜಯನಗರ ಹಾಗೂ ಬಳ್ಳಾರಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಶ್ರೀರಾಮುಲು ಅವರು ಕೊಟ್ಟ ಮಾತಿನಂತೆ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಅದರಲ್ಲಿ ಎಸ್​ಸಿ, ಎಸ್ಟಿ ಸಮಯದಾಯಕ್ಕೆ ಸಚಿವ ಶ್ರೀರಾಮುಲು ಕೊಟ್ಟ ಮಾತಿನಂತೆ ಮೀಸಲಾತಿ ಕೊಡಿಸಿದ್ದಾರೆ. ಶ್ರೀರಾಮುಲು ಮಾತು ಕೊಟ್ರೆ ಅದು ಶ್ರೀರಾಮ ಮಾತು ಕೊಟ್ಟಂತೆ ಎಂದರು.

ಮೀಸಲಾತಿ ಹೆಚ್ಚಳ.. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ

ಮೀಸಲಾತಿಯಿಂದ SC/ST ಸಮುದಾಯಕ್ಕೆ ಒಳ್ಳೆಯದಾಗಲಿದೆ. ಈ ಎರಡು ಸಮುದಾಯಗಳ ಮೀಸಲಾತಿಯನ್ನು ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಹಿಂದುಳಿದ ಸಮಾಜದವರಿಗೆ ಶೈಕ್ಷಣಿಕ, ಆರ್ಥಿಕವಾಗಿ ಅನೂಕೂಲವಾಗಲಿದೆ. ಮೀಸಲಾತಿ ಕೊಟ್ಟಿರುವುದರಿಂದ ಮೀಸಲು ಕ್ಷೇತ್ರದಲ್ಲಿ ಬಿಜೆಪಿಗೆ ಪ್ಲಸ್ ಆಗಲಿದೆ. ನವೆಂಬರ್ 5 ರಂದು ಬಳ್ಳಾರಿಯಲ್ಲಿ ಶ್ರೀರಾಮುಲು ನೇತೃತ್ವದಲ್ಲಿ ಅದ್ಧೂರಿಯಾಗಿ ಎಸ್ಟಿ ಸಮಾವೇಶ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ: ಧರಣಿ ಕೈಬಿಟ್ಟ ಪ್ರಸನ್ನಾನಂದ ಸ್ವಾಮೀಜಿ, ಸಂಭ್ರಮಾಚರಣೆ

ABOUT THE AUTHOR

...view details