ಹೊಸಪೇಟೆ: ಜಿಲ್ಲೆಯಲ್ಲಿ ಪ್ರತಿ ದಿನ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿತರು ಹೆಚ್ಚುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವ, ಆರೋಗ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಡಿವೈಎಫ್ಐ ರಾಜ್ಯ ಘಟಕದ ಉಪಾಧ್ಯಕ್ಷ ಬಿಸಾಟಿ ಮಹೇಶ್ ಆರೋಪಿಸಿದರು.
ಕೊರೊನಾ ಸೋಂಕಿನಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾದ ಸೋಂಕಿತರು ಗುಣಮುಖರಾಗದೇ ಸಾವನ್ನಪ್ಪುತ್ತಿದ್ದಾರೆ. ಆದರೆ, ಜಿಲ್ಲಾಡಳಿತ ಇದೆಲ್ಲವೂ ಸಹಜ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ. ಜಿಲ್ಲಾಸ್ಪತ್ರೆಯಲ್ಲಿ ನುರಿತ ವೈದ್ಯರಿದ್ದಾಗಲೂ ಸಹ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕಾರಣವನ್ನು ಜಿಲ್ಲಾಡಳಿತ ತಿಳಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.