ಬಳ್ಳಾರಿ: ಮುಂದಿನ ಹತ್ತು ವರ್ಷದೊಳಗೆ ಇಡೀ ವಿಶ್ವದಲ್ಲೇ ಭಾರತ 3ನೇ ಅತಿ ದೊಡ್ಡ ಆರ್ಥಿಕ ಸುಧಾರಣೆ ಹೊಂದಿದ ದೊಡ್ಡ ಶಕ್ತಿಶಾಲಿ ದೇಶವಾಗಿ ಹೊರಹೊಮ್ಮಲಿದೆ ಎಂದು ಜಿಂದಾಲ್ ಸಂಸ್ಥೆಯ ಮಾಲೀಕ ಸಜ್ಜನ್ ಜಿಂದಾಲ್ ಅಭಿಪ್ರಾಯಪಟ್ಟರು.
ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಉಕ್ಕು ಕಾರ್ಖಾನೆಯ ವಿದ್ಯಾನಗರದ ಸಭಾಂಗಣದಲ್ಲಿಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ರಾಜ್ಯ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆಗಳ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲೇ ಭಾರತ, ಚೀನಾ ಹಾಗೂ ಅಮೆರಿಕಾ ದೇಶಗಳು ದೊಡ್ಡ ಆರ್ಥಿಕ ಶಕ್ತಿಯಾಗಲಿವೆ ಎಂದರು.
ಈ ದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಎಫ್ಕೆಸಿಸಿ ಉತ್ತಮ ಬೆಂಬಲ ನೀಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆಗಳಿಗೆ ಉತ್ತೇಜನ ನೀಡಬೇಕು. ಈ ದೇಶದ ಆರ್ಥಿಕಮಟ್ಟ ಸುಧಾರಣೆಯಾಗಬೇಕಾದ್ರೆ ಕೈಗಾರಿಕೆಗಳು ಹೆಚ್ಚೆಚ್ಚು ಸ್ಥಾಪನೆಯಾಗಬೇಕು ಎಂದರು.
ಇಡೀ ವಿಶ್ವದಲ್ಲೇ ಭಾರತ ದೇಶ ಮೂರನೇ ಆರ್ಥಿಕ ಶಕ್ತಿಯಾಗಲಿದೆ: ಸಜ್ಜನ್ ಜಿಂದಾಲ್! ಅದೇ ರೀತಿ ಕರ್ನಾಟಕ ರಾಜ್ಯದ ಬಳ್ಳಾರಿ ಜಿಲ್ಲೆಯಲ್ಲಿ ನೈಸರ್ಗಿಕ ಸಂಪನ್ಮೂಲ ಹೇರಳವಾಗಿದೆ. ಅದರ ಸದ್ಬಳಕೆಗೂ ಉಭಯ ಸರ್ಕಾರಗಳು ಆದ್ಯತೆ ನೀಡಬೇಕು. ಬಳ್ಳಾರಿಯಲ್ಲಿ ಕೈಗಾರಿಕಾ ಕಾರ್ಖಾನೆಗಳ ಸ್ಥಾಪನೆಗೆ ಪೂರಕವಾಗಿದೆ. ಅದಕ್ಕೆ ಸರ್ಕಾರಗಳೂ ಕೂಡ ಅಗತ್ಯ ಸೌಲಭ್ಯವನ್ನು ಕಲ್ಪಿಸುತ್ತಿದೆ. ನೈಸರ್ಗಿಕ ಸಂಪನ್ಮೂಲ ಸದ್ಬಳಕೆ ಮಾಡಿಕೊಂಡು ದೇಶದ ಆರ್ಥಿಕಮಟ್ಟ ಸುಧಾರಣೆಗೆ ನಾವೆಲ್ಲರೂ ಶ್ರಮಿಸಬೇಕೆಂದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ಅವರು ಮಾತನಾಡಿ, ಈ ಸಮಾವೇಶ ಹತ್ತು ವರ್ಷದ ಕನಸಿದು. ಅದು ಈಗ ನನಸಾಗಿದೆ. ರೋಟಿನ್ ಸಿಸ್ಟಮ್ನಲ್ಲಿ ಬರುವಂತಹದ್ದಾಗಿದೆ. ಕೈಗಾರಿಕೆಗಳು ಸ್ಥಾಪನೆಯಾದ್ರೆ ಮಾತ್ರ, ಆಯಾ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಯಾಗುತ್ತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಬೇಕು ಎಂದರು.