ಹೊಸಪೇಟೆ (ವಿಜಯನಗರ) : ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ ನಾಲ್ಕು ಟಿಎಂಸಿ ನೀರು ಹರಿದು ಬಂದಿದೆ. ಪ್ರಸ್ತುತ ಜಲಾಶಯದಲ್ಲಿ 41.834 ಟಿಎಂಸಿ ನೀರು ಸಂಗ್ರಹವಾಗಿದೆ.
ಇಂದು (ಶನಿವಾರ) ಬೆಳಗ್ಗೆ ಜಲಾಶಯಕ್ಕೆ 46,054 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿದೆ. ಹಾಗಾಗಿ, ನೀರಿನ ಸಂಗ್ರಹ ಮಟ್ಟ ಒಂದೇ ದಿನಕ್ಕೆ ಹೆಚ್ಚಾಗಿದೆ. ಪ್ರಸಕ್ತ ವರ್ಷದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಇದೇ ಮೊದಲು.