ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ನಗರದ ನಾನಾ ಕಡೆ ಸೇರಿದಂತೆ ಅಂತರ್ ಜಿಲ್ಲೆಗಳಲ್ಲಿನ ಮನೆಗಳ್ಳತನದಲ್ಲಿ ತೊಡಗಿದ್ದ ಏಳು ಮಂದಿ ಕಳ್ಳರನ್ನ ಸಿರುಗುಪ್ಪ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೋವಿಡ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಕೂಲಿ ಕೆಲಸ ಸಿಗದೇ ಸಿರುಗುಪ್ಪ ನಗರ ಸೇರಿದಂತೆ ರಾಯಚೂರು ಮತ್ತು ದಾವಣಗೆರೆ ಜಿಲ್ಲೆಯ ನಾನಾ ಕಡೆಗಳಲ್ಲಿ ಬೈಕ್, ಮೊಬೈಲ್ ಫೋನ್, ಒಡವೆಗಳನ್ನು ಕಳ್ಳತನ ಮಾಡುತ್ತಿದ್ದ ಹುಲೇಶ, ನಾಗರಾಜ, ಇಸ್ಮಾಯಿಲ್ ಹಾಗೂ ಮತ್ತಿತರರನ್ನ ಬಂಧಿಸಲಾಗಿದೆ.