ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ 100 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ : ಸಚಿವ ಬಿ. ನಾಗೇಂದ್ರ - ಈಟಿವಿ ಭಾರತ್​ ಕನ್ನಡ ನ್ಯೂಸ್

ತಮಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಸ್ಥಾನ ಸಿಕ್ಕಿರುವುದು ಒಂದು ವರ ಎಂದು ಸಚಿವ ನಾಗೇಂದ್ರ ಹೇಳಿದರು.

ಸಚಿವ ಬಿ. ನಾಗೇಂದ್ರ
ಸಚಿವ ಬಿ. ನಾಗೇಂದ್ರ

By

Published : Jun 4, 2023, 8:41 PM IST

ಗ ಸುಸಜ್ಜಿತವಾದ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣ- ಸಚಿವ ನಾಗೇಂದ್ರ

ಬಳ್ಳಾರಿ :ನಾನು ಹುಟ್ಟಿ ಬೆಳೆದ ಈ ಭಾಗದಲ್ಲಿ ಹಲವಾರು ವರ್ಷಗಳಿಂದ ಶಾಸಕರದಾಗ ಸುಸಜ್ಜಿತವಾದ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡುವ ಕನಸಿತ್ತು. ಆದರೇ ಇವತ್ತು ಅದೇ ಇಲಾಖೆಯ ಸಚಿವನಾಗಿ ರಾಜ್ಯ ಸರ್ಕಾರ ನನ್ನನ್ನು ನೇಮಕ ಮಾಡಿದೆ. ಇದರಿಂದ ಇನ್ನಷ್ಟು ಸುಲಭವಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 100 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣವನ್ನು ಮಾಡುತ್ತೇವೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದರು.

ಇಂದು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲೆಡೆ ನಡೆಯುವ ಪಂದ್ಯಾವಳಿಗಳು ನಮ್ಮ ಉತ್ತರ ಕರ್ನಾಟಕ ಭಾಗದಲ್ಲಿ ನಡೆ ಬೇಕಾದರೆ ಬಳ್ಳಾರಿಯನ್ನು ಹೆಡ್ ಕ್ವಾರ್ಟರ್ ಆಗಿ ಮಾಡಿಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕೇವಲ ಕ್ರೀಡಾಂಗಣ ಮಾಡಿ ಬಿಡುವಂತಹದ್ದಲ್ಲ. ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆ ಉತ್ತಮ ಕ್ರೀಡಾಂಗಣ ಹಾಗೂ ಸೌಲಭ್ಯಗಳಿಲ್ಲದೆ ಮಕ್ಕಳು ಕ್ರೀಡೆಯಿಂದ ವಂಚಿತರಾಗಿದ್ದಾರೆ. ಹಾಗಾಗಿ ಅಂತವರನ್ನು ಗುರುತಿಸಿ ಎತ್ತಿಹಿಡಿಯುವ ಕೆಲಸವನ್ನು ಮೊದಲು ನಾನು ಮಾಡುತ್ತೇನೆ. ನಾನು ಯುವಕನಾಗಿರುವುದರಿಂದ ಉತ್ತಮ ಕಾರ್ಯ ಮಾಡುವ ನಂಬಿಕೆಯಿಂದ ಯುವಜನ ಸೇವಾ ಕ್ರೀಡಾ ಇಲಾಖೆಯನ್ನು ನೀಡಿದ್ದಾರೆ. ನನಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಸ್ಥಾನ ಸಿಕ್ಕಿರುವುದು ಒಂದು ವರ ಎಂದು ಬಿ. ನಾಗೇಂದ್ರ ತಿಳಿಸಿದರು.

ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಸೌಲಭ್ಯ ಕಲ್ಪಿಸಲು ಆದ್ಯತೆ :ನೂತನ ಸಚಿವ ಸಂಪುಟದಲ್ಲಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಯುವಜನ ಸೇವೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಖಾತೆ ನೀಡಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಡಿ ಉತ್ತಮ ಕಾರ್ಯ ನಿರ್ವಹಿಸುವ ಗುರಿ ಹೊಂದಿದ್ದೇನೆ. ಅರಣ್ಯ ಪರಿಸರದಲ್ಲಿ ವಾಸ ಮಾಡುವ ಪರಿಶಿಷ್ಟ ಪಂಗಡಗಳ ಜನರಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಸರ್ಕಾರದ ಯೋಜನೆಗಳು ಪಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಬಡತನ ರೇಖೆಗಳಿಗಿಂತ ಕೆಳಗಿರುವ ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಸೌಲಭ್ಯಗಳನ್ನು ಕಲ್ಪಿಸಲು ಅದ್ಯತೆ ನೀಡಲಾಗುವುದು ಎಂದು ಬಿ. ನಾಗೇಂದ್ರ ಹೇಳಿದರು.

ಜೀನ್ಸ್ ಅಪೆರಲ್ ಪಾರ್ಕ :ಚುನಾವಣೆ ಪೂರ್ವದಲ್ಲಿ ಪ್ರಚಾರಕ್ಕೆ ಬಂದಿದ್ದ ವೇಳೆ ರಾಷ್ಟ್ರೀಯ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರು ಹೇಳಿದಂತೆ ಜೀನ್ಸ್ ಅಪೆರಲ್ ಪಾರ್ಕ್​ ಮಾಡಲಾಗುವುದು. ಇದರ ಬಗ್ಗೆ ರಾಹುಲ್ ಗಾಂಧಿ ನಿಲುವು ಅಚಲವಾಗಿದ್ದು, ಈ ವಿಚಾರವನ್ನು ದೇಶ ವಿದೇಶಗಳಲ್ಲಿ ಬಳ್ಳಾರಿ ಜೀನ್ಸ್ ಬಗ್ಗೆ ಮಾತನಾಡಿದ್ದಾರೆ. ಐದು ಗ್ಯಾರೆಂಟಿಗಳ ಜಾರಿ ನಂತರ ಜೀನ್ಸ್ ಅಪೆರಲ್ ಪಾರ್ಕ್​ಗಾಗಿ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು 5000 ಕೋಟಿ ರೂ. ಬಿಡುಗಡೆ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ಈ ಹಿಂದಿನ ಸರ್ಕಾರದ ಅಧಿಕಾರ ಅವಧಿಯಲ್ಲಿ ವಿವಿದ ಇಲಾಖೆಗಳಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ನನ್ನ ಇಲಾಖೆಯಲ್ಲೂ ಕಂಡು ಬಂದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ಹಾಗು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವನಾಗಿ ರಾಜ್ಯದ ಚಾಮರಾಜನಗರ ಜಿಲ್ಲೆಯಿಂದ ಹಿಡಿದು ಬೀದರ್, ಬೆಳಗಾವಿಯ ಕಟ್ಟ ಕಡೆ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡುತ್ತೇನೆ ಎಂದರು.

ಇದನ್ನೂ ಓದಿ :ನಾಟಕ ಮಾಡಿದ್ರೆ ಜೈಲು ಕಂಬಿ ಎಣಿಸಬೇಕಾಗುತ್ತದೆ: ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂ.ಬಿ ಪಾಟೀಲ್ ಖಡಕ್​ ವಾರ್ನಿಂಗ್

ABOUT THE AUTHOR

...view details