ಹೊಸಪೇಟೆ: ನಗರದ ಅಂತಾರಾಷ್ಟ್ರೀಯ ವೇಟ್ ಲಿಫ್ಟರ್ ಕಿಚಡಿ ದಯಾನಂದ (55) ಕೊರೊನಾಗೆ ಇಂದು ಬಲಿಯಾಗಿದ್ದಾರೆ.
25 ದಿನಗಳ ಹಿಂದೆ ಕಾಶ್ಮೀರಕ್ಕೆ ಸ್ಪರ್ಧೆಯಲ್ಲಿ ಭಾಗಿಯಾಗಲು ತೆರಳಿದ್ದರು. ಒಂದು ವಾರದ ಹಿಂದೆ ಅವರಿಗೆ ಕೊರೊನಾ ದೃಢಪಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.