ಬಳ್ಳಾರಿ:ಡಿಸಿಎಂ ನಿರೀಕ್ಷೆಯಲ್ಲಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಬಿಗ್ ಶಾಕ್ ಎದುರಾಗಿದೆ. ಮಗಳ ನಿಶ್ಚಿತಾರ್ಥದ ಸಂಭ್ರಮದಲ್ಲಿರೋ ಅವರು, ಇದೀಗ ಸರ್ಕಾರಿ ಭೂಮಿ ಕಬಳಿಕೆ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ.
ಬಳ್ಳಾರಿ ಹೊರವಲಯದಲ್ಲಿರುವ ಜಮೀನನ್ನು ಕಬಳಿಸಿದ ಆರೋಪ ಎದುರಾಗಿದ್ದು, ಭೂಕಬಳಿಕೆ ತಡೆ ವಿಶೇಷ ನ್ಯಾಯಾಲಯವು ಪ್ರಕರಣ ದಾಖಲಿಸಿಕೊಂಡಿದೆ.
2008ರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಶ್ರೀರಾಮುಲು, ಕೌಲ್ ಬಜಾರ್ ಪ್ರದೇಶದ 57 ಎಕೆರೆ ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕುರಿತಾಗಿ ನಿವೇಶನ ಕಳೆದುಕೊಂಡಿರುವ ಜಿ.ಕೃಷ್ಣಮೂರ್ತಿ ಎಂಬುವರು ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಸಚಿವ ಬಿ. ಶ್ರೀರಾಮುಲು ವಿರುದ್ಧ ಭೂ ಕಬಳಿಕೆ ಆರೋಪ ಇನ್ನು ಈ ಕುರಿತಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಎನ್.ನಾರಾಯಣ ನೇತೃತ್ವದ ಪೀಠ, ಈ ಸಂಬಂಧ ಸಮಗ್ರ ವರದಿ ನೀಡುವಂತೆ, ಬಳ್ಳಾರಿಯ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ.