ಬಳ್ಳಾರಿ:ತೀವ್ರ ಕುತೂಹಲ ಕೆರಳಿಸಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ತಮ್ಮ ಹಕ್ಕು ಚಲಾಯಿಸಿದ್ದಾರೆ.
ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯ ಮತಗಟ್ಟೆಯಲ್ಲಿ ಶಾಸಕ ಬಿ.ಶ್ರೀರಾಮುಲು ಮತದಾನ ಮಾಡಿದರೆ, ತಾಳೂರು ರಸ್ತೆಯ ಶಾಂತಿ ಶಿಶು ವಿಹಾರ ಶಾಲೆಯ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಮತದಾನ ಮಾಡಿದರು.
ರಂಗನಾಥ ಶಾಲೆಯ ಮತಗಟ್ಟೆಯಲ್ಲಿ ವಿಧಾನ ಷರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಮತ್ತವರ ಕುಟುಂಬ ಸದಸ್ಯರು ಮತದಾನ ಮಾಡಿದರು. ನಗರದ ಅವಂಬಾವಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ತಮ್ಮ ಹಕ್ಕು ಚಲಾಯಿಸಿದ್ದಾರೆ.