ಹೊಸಪೇಟೆ: ರಾಜ್ಯ ಸರ್ಕಾರ ಬಜೆಟ್ನಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ.ಅನುದಾನ ನೀಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಅನಂತಶಯನ ಗುಡಿಯಿಂದ ರೋಟರಿ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.
ಬಜೆಟ್ನಲ್ಲಿ ಕನ್ನಡ ವಿವಿಗೆ 100 ಕೋಟಿ ಅನುದಾನಕ್ಕಾಗಿ ಹೊಸಪೇಟೆಯಲ್ಲಿ ಜಾಥಾ - Hampi Kannada University
ರಾಜ್ಯ ಸರ್ಕಾರ ಬಜೆಟ್ನಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಆಗ್ರಹಿಸಿ ನಾನಾ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕಾಲ್ನಡಿಗೆ ಜಾಥಾ ನಡೆಸಿದರು.
ರಾಜ್ಯ ಬಜೆಟ್ನಲ್ಲಿ ಕನ್ನಡ ವಿವಿಗೆ 100 ಕೋಟಿ ಅನುದಾನಕ್ಕಾಗಿ ಹೊಸಪೇಟೆಯಲ್ಲಿ ಜಾಥಾ
ಜಾಥಾದಲ್ಲಿ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ನೌಕರರು ಭಾಗವಹಿಸಿದ್ದರು. ಭಾಷಾ ಸಂಶೋಧನೆಗಾಗಿ ಕನ್ನಡ ವಿಶ್ವವಿದ್ಯಾಲಯವಿದೆ. ಇಲ್ಲಿ 1000 ವಿದ್ಯಾರ್ಥಿಗಳು ಸಂಶೋಧನೆ ಮಾಡುತ್ತಿದ್ದಾರೆ. ಆದರೆ, ಅನುದಾನ ಕೊರತೆಯಿಂದ ವಿದ್ಯಾರ್ಥಿಗಳಿಗೆ ಎರಡು ವರ್ಷದಿಂದ ಫೆಲೋಶಿಪ್ ನೀಡಲು ಸಾಧ್ಯವಾಗುತ್ತಿಲ್ಲ.
ಅಲ್ಲದೇ, ವಿಶ್ವವಿದ್ಯಾಲಯದ ಹೊರಗುತ್ತಿಗೆ ನೌಕರರಿಗೆ ಕಳೆದ 9 ತಿಂಗಳಿಂದ ವೇತನ ನೀಡಿಲ್ಲ. ವಿಶ್ವವಿದ್ಯಾಲಯ ಉಳಿವಿಗಾಗಿ ಹೋರಾಟ ನಡೆಸಲಾಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.