ಕರ್ನಾಟಕ

karnataka

ETV Bharat / state

ಕಲ್ಯಾಣ ಕರ್ನಾಟಕ, ವಿಶ್ವಕರ್ಮ ಜಯಂತಿಯ ಪೂರ್ವ ಸಿದ್ಧತಾ ಸಭೆ - vishwakarma jayanthi celebration

ಸೆ.17ರಂದು ಕಲ್ಯಾಣ ಕರ್ನಾಟಕ ದಿನಾಚರಣೆ ಹಾಗೂ ವಿಶ್ವಕರ್ಮ ದಿನಾಚರಣೆಯನ್ನು ಸುರಕ್ಷತಾ ಕ್ರಮಗಳೊಂದಿಗೆ ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವುದರ ಜೊತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳವಾಗಿ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಹೊಸಪೇಟೆ ತಹಶೀಲ್ದಾರ್ ಎಚ್.ವಿಶ್ವನಾಥ ತಿಳಿಸಿದರು.‌

KALYANA KARNATAKA AND VISHWAKARMA JAYANTHI PREPARATORY MEETING
ಕಲ್ಯಾಣ ಕರ್ನಾಟಕ ಹಾಗೂ ವಿಶ್ವಕರ್ಮ ಜಯಂತಿ

By

Published : Sep 12, 2020, 12:14 AM IST

ಹೊಸಪೇಟೆ: ಸೆ.17ರಂದು ಕಲ್ಯಾಣ ಕರ್ನಾಟಕ ದಿನಾಚರಣೆ ಹಾಗೂ ವಿಶ್ವಕರ್ಮ ದಿನಾಚರಣೆಯನ್ನು ಸುರಕ್ಷತಾ ಕ್ರಮಗಳೊಂದಿಗೆ ಆಚರಿಸಲು ನಿರ್ಧರಿಸಲಾಗಿದೆ.

ತಾಲೂಕು ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ತಹಶೀಲ್ದಾರ್ ಎಚ್.ವಿಶ್ವನಾಥ ಮಾತನಾಡಿದರು.ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವುದರ ಜೊತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳವಾಗಿ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎಚ್.ವಿಶ್ವನಾಥ ತಿಳಿಸಿದರು.

ಅಂದು ಬೆಳಿಗ್ಗೆ 9 ಗಂಟೆಗೆ ತಾಲೂಕು ಕಚೇರಿ ಆವರಣದಲ್ಲಿ ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಗುವುದು.‌ ನಂತರ 9.30ಕ್ಕೆ ವಿಶ್ವಕರ್ಮ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ಆಚರಿಸಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details