ಕರ್ನಾಟಕ

karnataka

ETV Bharat / state

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಸಚಿವ ಆನಂದ್​ ಸಿಂಗ್ ಚಾಲನೆ - ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಚಾಲನೆ

ಬಳ್ಳಾರಿ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಸಚಿವ ಆನಂದ್​ ಸಿಂಗ್ ಚಾಲನೆ ನೀಡಿದರು.

Kalyana Karnataka Liberation Day
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

By

Published : Sep 17, 2020, 11:53 AM IST

ಬಳ್ಳಾರಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್ ಚಾಲನೆ ನೀಡಿದರು.

ಸರ್ದಾರ್ ವಲ್ಲಭಭಾಯ್​ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಸಚಿವರು, ಹೈದರಾಬಾದ್ ನಿಜಾಮರ ಕಪಿಮುಷ್ಠಿಯಿಂದ ಹೊರಬರಲು ಕಲ್ಯಾಣ ಕರ್ನಾಟಕ ಭಾಗದವರು ಅವಿರತವಾಗಿ ಶ್ರಮಿಸಿದ್ದಾರೆ. ಈ‌ ದಿನ ನಾನು ಸಂತಸದಿಂದ ಧ್ವಜಾರೋಹಣ ನೆರವೇರಿಸುತ್ತಿದ್ದೇನೆ ಎಂದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಬಳಿಕ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸದಸ್ಯ ಸಿರಿಗೇರಿ ಪನ್ನರಾಜ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ, ವಿಧಾನಪರಿಷತ್​ ಸದಸ್ಯರುಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿಲ್ಲಾಧಿಕಾರಿ ಎಸ್​.ಎಸ್​ ನಕುಲ್, ಎಸ್ಪಿ ಸೈದುಲು ಅಡಾವತ್, ಜಿ.ಪಂ. ಸಿಇಒ ಕೆ.ಆರ್. ನಂದಿನಿ, ಎಎಸ್ಪಿ ಲಾವಣ್ಯ, ಬುಡಾ ಅಧ್ಯಕ್ಷ ದಮ್ಮೂರು ಶೇಖರ, ಎಡಿಸಿ ಮಂಜುನಾಥ, ಎಸಿ ರಮೇಶ ಕೋನರೆಡ್ಡಿ‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ ಸೇರಿದಂತೆ ಪ್ರಮುಖರು ಇದ್ದರು.

ABOUT THE AUTHOR

...view details