ಬಳ್ಳಾರಿ: ಉತ್ತರಪ್ರದೇಶದ ಹಥ್ರಾಸ್ನಲ್ಲಿ ವಾಲ್ಮೀಕಿ ಸಮುದಾಯದ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಕಂಪ್ಲಿಯ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಜಿಲ್ಲೆಯ ಕುರುಗೋಡು ತಾಲೂಕಿನ ಗೆಣಿಕೆಹಾಳ್ ರಸ್ತೆಯಿಂದ ಕುರುಗೋಡು ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಥ್ರಾಸ್ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೀಡಾದ ವಾಲ್ಮೀಕಿ ಸಮುದಾಯದ ಯುವತಿ ಕುಟುಂಬದವರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರೋದು ಹಾಗೂ ಅವರ ಜೊತೆಗಿನ ಪೊಲೀಸರ ಗೂಂಡಾ ವರ್ತನೆಯನ್ನ ಕಂಪ್ಲಿ ಶಾಸಕ ಜೆ.ಎನ್.ಗಣೇಶ ಖಂಡಿಸಿದ್ದಾರೆ.