ಬಳ್ಳಾರಿ: ಕಂಪ್ಲಿ ತಾಲೂಕಿನಲ್ಲಿ ಕೃಷಿ ಜಮೀನು ಬದಲಾವಣೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಸಂಗಡಿಗರು ವ್ಯಕ್ತಿಯೊಬ್ಬರಿಗೆ 25 ಸಾವಿರ ರೂಪಾಯಿ ಲಂಚ ಬೇಡಿಕೆಯಿಟ್ಟಿದ್ದರು. ಅದರಂತೆ ಎಪಿಎಂಸಿ ಹತ್ತಿರದ ಕಟ್ಟಡದಲ್ಲಿ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪಿಡಿಒ ಸೇರಿದಂತೆ ಮೂವರು ಸಂಗಡಿರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಪಟ್ಟಣದ ನಿವಾಸಿ ನಾರಾಯಣಸ್ವಾಮಿ ಎನ್ನುವವರು ಮುದ್ದಾಪುರ ಗ್ರಾ.ಪಂ. ವ್ಯಾಪ್ತಿಯ ತಮ್ಮ ಜಮೀನನ್ನು NA ಮಾಡಿಕೊಡಲು ಅರ್ಜಿ ಸಲ್ಲಿಸಿದ್ದು, ಅರ್ಜಿ ಇತ್ಯರ್ಥಕ್ಕೆ ಪಿಡಿಒ ಹಾಗೂ ಗ್ರಾ.ಪಂ ಸದಸ್ಯನೊಡನೆ ಸೇರಿ 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು.