ಬಳ್ಳಾರಿ:ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಹಿಂದಕ್ಕೆ ಪಡೆಯುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ನೀಡಿರುವುದನ್ನು ಖಂಡಿಸಿ ಹಾಗೂ ಆಂಧ್ರಪ್ರದೇಶದ ಸಂಘಟನೆಗಳು ಬಳ್ಳಾರಿಯನ್ನು ಆಂಧ್ರಪ್ರದೇಶಕ್ಕೆ ಸೇರಿಸಲು ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರವೇ ಪ್ರತಿಭಟನೆ ನಡೆಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ. ಬಳ್ಳಾರಿಯಲ್ಲಿ ಸೀತಾರಾಮ ಕಾಂಪ್ಲೆಕ್ಸ್ ಮೂಲಕ ದಾರಿ ಉದ್ದಕ್ಕೂ ಸಚಿವ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.