ಕರ್ನಾಟಕ

karnataka

ETV Bharat / state

ಬಳ್ಳಾರಿ: ಎ.ಜೆ. ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ದಸಂಸ ಒತ್ತಾಯ

ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವು ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದರಿಂದ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ, ಒಳಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಒತ್ತಾಯಿಸಿದರು.

karnataka-dalit-conflict-committee-
ಕರ್ನಾಟಕ ದಲಿತ ಸಂಘರ್ಷ ಸಮಿತಿ

By

Published : Sep 7, 2020, 8:43 PM IST

ಬಳ್ಳಾರಿ:ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಿ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಅವರು, ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವು ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ತೀರ್ಪು ನೀಡಿರುವುದರಿಂದ ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ, ಒಳಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಬೇಕು. ರಾಜ್ಯ ಸರ್ಕಾರ ಪಿ.ಟಿ.ಸಿ.ಎಲ್ ಕಾಯ್ದೆಗೆ ಸುಗ್ರೀವಾಜ್ಞೆ ತರಬೇಕೆಂದು ಒತ್ತಾಯಿಸಿದರು.

ಸ್ಪೃಶ್ಯ ಜಾತಿಗಳು ಮೀಸಲಾತಿಯನ್ನು ಕಸಿದು ಅಸ್ಪೃಶ್ಯ ಜಾತಿಗಳಿಗೆ ಅನ್ಯಾಯವೆಸಗುತ್ತಿದ್ದಾರೆ. ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಅಧಿವೇಶನದಲ್ಲಿ ಮಂಡಿಸಿ, ಒಳ ಮೀಸಲಾತಿ ಜಾರಿಗೊಳಿಸಿ ನಮಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ಈ ಸಮಯದಲ್ಲಿ ಸಮಿತಿಯ ಮುಖಂಡರಾದ ಮುಂಡ್ರಿಗಿ ನಾಗರಾಜ, ಎಸ್‌. ವಿಘ್ನೇಶ್, ಪಿ. ಜಗದೀಶ್ವರ ರೆಡ್ಡಿ, ಬಿ. ಗೋವರ್ಧನ, ಹೆಚ್. ತಾಯಪ್ಪ, ನಿಂಗಪ್ಪ, ಆರ್. ವೀರಭದ್ರಪ್ಪ, ನಟರಾಜ, ಕೆ‌. ಮುರಳಿ ಮೋಹನ್, ಲಲಿತಮ್ಮ, ಪಿ. ಗುರುದೇವ, ಹನುಮಂತಪ್ಪ ಸೇರಿದಂತೆ ಮತ್ತಿತರರು ಇದ್ದರು.

ABOUT THE AUTHOR

...view details