ಹೊಸಪೇಟೆ: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದು ಮತ್ತು ಸೇವೆಯಿಂದ ಕೈಬಿಡಬಾರದೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಸದಸ್ಯರು ಸಚಿವ ಆನಂದ ಸಿಂಗ್ ಅವರ ಆಪ್ತ ಕಾರ್ಯದರ್ಶಿ ಧರ್ಮೇಂದ್ರ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 20-25 ವರ್ಷಗಳಿಂದ ನಿರಂತರವಾಗಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಸೇವಾ ಭದ್ರತೆಗೆ ಒಳಪಡಿಸಬೇಕು, ಬಾಕಿ ಇರುವ ವೇತನವನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕು. ಜೊತೆಗೆ ರಜಾ ಅವಧಿಯನ್ನು ಕೆಲಸದ ಅವಧಿಯೆಂದು ಪರಿಗಣಿಸುವಂತೆ ಆಗ್ರಹಿಸಿದರು.