ಬಳ್ಳಾರಿ: ನಗರದ ಗುಗ್ಗರಹಟ್ಟಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಮೂಲಕ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿದೆ.
ಮಂಗಳವಾರ ಬೆಳಗ್ಗೆಯಿಂದಲೇ 140 ಜನ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ 28 ಜನ ಆರೋಗ್ಯ ಸಿಬ್ಬಂದಿ ಮತ್ತು ಮೇಲ್ವಿಚಾರಕರ ತಂಡವು ಗುಗ್ಗರಹಟ್ಟಿ, ವೆಂಕಟಮ್ಮ ಕಾಲೋನಿ, ಕಕ್ಕರಲಾ ತೋಟ, ರಾಜಾಸಾಬ್ ಕಾಲೋನಿಗಳಲ್ಲಿ ಪ್ರತಿ ಮನೆಗೂ ಭೇಟಿ ನೀಡಿ ವಿಶ್ವ ಆರೋಗ್ಯ ಸಂಸ್ಥೆಯ ನಿಯಮಾವಳಿ ಅನುಸಾರ ಸಿದ್ಧಪಡಿಸಲಾದ ನಮೂನೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ.