ಬಳ್ಳಾರಿ/ಹೊಸಪೇಟೆ :ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 511ನೇ ಜಯಂತಿಯನ್ನು ಬಳ್ಳಾರಿ ಮತ್ತು ಹೊಸಪೇಟೆಯಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.
ಬಳ್ಳಾರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಅವರು ಕೇಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಿದರು. ಇದೇ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಇದ್ದರು.