ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 9ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಶಿವಪುರದ ಬಳಿ ನಡೆದಿದೆ. ಬಳ್ಳಾರಿಯಿಂದ ಹಡ್ಲಗಿ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸಾರಿಗೆ ಬಸ್ ರಸ್ತೆ ಬದಿಯ ಗದ್ದೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಸುಮಾರು 50 ಕ್ಕೂ ಹೆಚ್ಚು ಜನರು ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದು, ಅದರಲ್ಲಿ 9 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೋಕಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೋಕಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ತಿಂಗಳು ಶಿವಮೊಗ್ಗದಲ್ಲೂ ಸಾರಿಗೆ ಬಸ್ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದ ಘಟನೆ ನಡೆದಿತ್ತು. ಸಾಗರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ಗೆಬೈಕ್ ಅಡ್ಡ ಬಂದಿತ್ತು. ಅಪಘಾತ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದರು. ಬಸ್ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಇತರರು ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದರು.
ಸ್ಟೇರಿಂಗ್ ಕಟ್ ಆಗಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಕೆಲದಿನಗಳ ಹಿದೆ ನಡೆದಿತ್ತು. ಹಳಿಯಾಳದಿಂದ ಸಾಗರಕ್ಕೆ ಹೋಗುತ್ತಿದ್ದ ಬಸ್ಸಿನಲ್ಲಿ 47 ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ಸ್ಟೇರಿಂಗ್ ಕಟ್ ಆಗಿ ಬಸ್ ಪಲ್ಟಿಯಾದ ತಕ್ಷಣ ಕಂದಕಕ್ಕೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದರು.