ಬಳ್ಳಾರಿ: ಸಾರ್ವಜನಿಕವಾಗಿ ವ್ಯಕ್ತಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುರುಗೋಡು ಪಿಎಸ್‌ಐ ಮಣಿಕಂಠ ಅವರನ್ನು ಅಮಾನತುಗೊಳಿಸಿ ಬಳ್ಳಾರಿ ಎಸ್ಪಿ ಸೈದುಲು ಅಡಾವತ್ ಆದೇಶಿಸಿದ್ದಾರೆ. ಮೂರು ದಿನಗಳ ಹಿಂದೆ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಸಾರ್ವಜನಿಕ ಸಭೆಯಲ್ಲಿ ಹೊನ್ನೂರುಸ್ವಾಮಿ ಎಂಬುವವರ ಮೇಲೆ ಪಿಎಸ್‌ಐ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕುರುಗೋಡು ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸಾರ್ವಜನಿಕವಾಗಿ ವ್ಯಕ್ತಿಗೆ ಹಲ್ಲೆ: ಕುರುಗೋಡು ಠಾಣೆಯ ಪಿಎಸ್‌ಐ ಅಮಾನತು - ಪಿಎಸ್‌ಐ
ಸಾರ್ವಜನಿಕ ಸಭೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಕಾರಣಕ್ಕೆ ಪಿಎಸ್‌ಐ ಮಣಿಕಂಠ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಸಾರ್ವಜನಿಕವಾಗಿ ವ್ಯಕ್ತಿಗೆ ಹಲ್ಲೆ