ಕರ್ನಾಟಕ

karnataka

ETV Bharat / state

ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟಕ್ಕೆ ವಕೀಲರ ಸಂಘದ ಬೆಂಬಲ - Anti-Partition Campaign in Bellary District

ಬಳ್ಳಾರಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಜಿಲ್ಲಾ ವಕೀಲರ ಸಂಘ ಬೆಂಬಲ ಸೂಚಿಸಿದೆ.

Bellary
ಬಳ್ಳಾರಿ ವಕೀಲರ ಸಂಘ

By

Published : Dec 17, 2020, 5:49 PM IST

ಬಳ್ಳಾರಿ:ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಅನಿರ್ದಿಷ್ಟಾವಧಿವರೆಗೆ ಕೈಗೊಂಡಿದ್ದ ಹೋರಾಟಕ್ಕೆ ಜಿಲ್ಲಾ ವಕೀಲರ ಸಂಘದಿಂದ ಬೆಂಬಲ ವ್ಯಕ್ತವಾಗಿದೆ.

ಬಳ್ಳಾರಿ ವಕೀಲರ ಸಂಘ

ಈ ಸಂಬಂಧ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಅಂಕಲಯ್ಯ, ಜಿಲ್ಲೆಯ ವಿಭಜನೆ ಮಾಡಿರೋದು ರಾಜ್ಯ ಸರ್ಕಾರದ ಆತುರದ ನಿರ್ಧಾರ. ಈ ಕೂಡಲೇ ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಿರೋದನ್ನ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಓದಿ:ಬಳ್ಳಾರಿ ಜಿಲ್ಲಾ ವಿಭಜನೆ ವಿರೋಧಿಸಿ ಧರಣಿ

ಕರ್ನಾಟಕ ಯುವಕ ಸಂಘದ ಅಧ್ಯಕ್ಷ ವಿಭೂತಿ ಎರಿಸ್ವಾಮಿ ಮಾತನಾಡಿ, ಜಿಲ್ಲೆ ವಿಭಜನೆಗೆ ನಾವಂತೂ ಬಿಡಲ್ಲ. ಮತ್ತೆ ಅಖಂಡ ಬಳ್ಳಾರಿ ಜಿಲ್ಲೆ ಒಂದಾಗಲಿದೆ. ಕೇವಲ ಒಬ್ಬ ವ್ಯಕ್ತಿಯ ಸ್ವಾರ್ಥಪರತೆ ಇಲ್ಲಿ ಹೆಚ್ಚಿದೆ. ಹೀಗಾಗಿ, ಇಂತಹ ಅಚಾತುರ್ಯ ನಡೆದಿದೆ. ಕೂಡಲೇ ರಾಜ್ಯ ಸರ್ಕಾರ ನೂತನ ವಿಜಯನಗರ ಜಿಲ್ಲೆ ಘೋಷಣೆ ಆದೇಶ ವನ್ನ ಹಿಂಪಡೆಯಬೇಕೆಂದು ಒತ್ತಾಯಿಸಿದರು.

ABOUT THE AUTHOR

...view details