ವಿಜಯನಗರ: ರಸ್ತೆ ದಾಟಲು ಮುಂದಾಗಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 50ರ ರಸ್ತೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ.
ಶಿವಪುರ ಭಾಗದ ಕೂಡ್ಲಿಗಿ ಅರಣ್ಯ ವಲಯದಲ್ಲಿ ಎನ್ಆರ್ಇಜಿ ಕಾಮಗಾರಿ ಮಾಡಿಸಲು ಗಾರ್ಡ್ ನಾಗರಾಜ ಎಂಬುವರು ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವಾಗ ಹೆದ್ದಾರಿ 50ರ ರಸ್ತೆಯಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಕಂಡು ತಕ್ಷಣ ಕೂಡ್ಲಿಗಿ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.