ಬಳ್ಳಾರಿ: ಇಲ್ಲಿನ ಸಂಜಯ ಗಾಂಧಿನಗರದ ದಯಾ ಕೇಂದ್ರದ ಹಿಂಭಾಗದ ಗುಡ್ಡದಲ್ಲಿ ಚಿರತೆಯೊಂದು ಕಳೆದೆರಡು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದು, ನಾಗರಿಕರು ಆತಂಕಗೊಂಡಿದ್ದಾರೆ. ಗುಡ್ಡದಲ್ಲಿ ಚಿರತೆ ಮಲಗಿರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದ ಕೂಡಲೇ ನಗರ ಡಿವೈಎಸ್ಪಿ ಶೇಖರಪ್ಪ ನೇತೃತ್ವದಲ್ಲಿ ಸಿಪಿಐಗಳಾದ ವಾಸುಕುಮಾರ್, ಷಣ್ಮುಖಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ನಾಗರಿಕರು ರಾತ್ರಿ ವೇಳೆ ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಿದ್ದಾರೆ.