ಕರ್ನಾಟಕ

karnataka

ETV Bharat / state

ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಪತ್ರ ಚಳವಳಿ - Asha activists protest in Bellary

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ರವಾನಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಂದ ಪತ್ರ ಚಳವಳಿ
ಆಶಾ ಕಾರ್ಯಕರ್ತೆಯರಿಂದ ಪತ್ರ ಚಳವಳಿ

By

Published : Jul 15, 2020, 4:55 PM IST

ಬಳ್ಳಾರಿ: ನಿಗದಿತ 12 ಸಾವಿರ ರೂ. ವೇತನ ನೀತಿಯನ್ನು ಜಾರಿಗೊಳಿಸಿ, ಕೊರೊನಾ ಸುರಕ್ಷತಾ ಸಾಮಗ್ರಿಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಆರನೇ ದಿನವೂ ಆಶಾ ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದರು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಶಾ ಕಾರ್ಯಕರ್ತೆಯರು ಪತ್ರ ಬರೆದಿದ್ದಾರೆ.

ನಗರದ ಅಂಚೆ ಕಚೇರಿಯ ಆವರಣದಲ್ಲಿ ಆಶಾ ಕಾರ್ಯಕರ್ತೆಯರು ಅಂಚೆ ಪತ್ರದ ಮೂಲಕ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಪತ್ರ ಚಳವಳಿ ಕೈಗೊಂಡರು.

ಆಶಾ ಕಾರ್ಯಕರ್ತೆಯರಿಂದ ಪತ್ರ ಚಳವಳಿ

ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಆಶಾ ಕಾರ್ಯಕರ್ತೆಯರ ನಗರ ಘಟಕದ ಕಾರ್ಯದರ್ಶಿ ರೇಷ್ಮಾ ಮಾತನಾಡಿ, ಕಳೆದ ಆರು ದಿನಗಳಿಂದ ನಿರಂತರವಾಗಿ 12 ಸಾವಿರ ರೂ. ಗೌರವಧನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ. ಹಾಗಾಗಿ ಇಂದು ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಕೇಳಿಕೊಳ್ಳುತ್ತಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಗೌರವ ಅಧ್ಯಕ್ಷೆ ಎ. ಶಾಂತ, ನಗರ ಘಟಕದ ಅಧ್ಯಕ್ಷೆ ರಾಮಕ್ಕ ಹಾಗೂ ನೂರಾರು ಕಾರ್ಯಕರ್ತೆಯರು ಭಾಗವಹಿಸಿದ್ದರು.

ABOUT THE AUTHOR

...view details