ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಿನಿ ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಾಲಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಲಾರಿ ಚಾಲಕ ಚಿನ್ನ(28) ಮೃತಪಟ್ಟ ವ್ಯಕ್ತಿ. ಈ ಲಾರಿಯಲ್ಲಿದ್ದ ಡೇವಿಡ್, ರಫಿಕ್ ಬಾಷಾ, ಪೀಟರ್ ಹೇಮಂತ್, ಕುಮಾರ ಅವರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಗಾಯಗೊಂಡ ಮತ್ತೋರ್ವ ಚಾಲಕ ಪರಮಾನಂದ ಅವರನ್ನು ಬಳ್ಳಾರಿ ವಿಮ್ಸ್ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.