ಬಳ್ಳಾರಿ:ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿ ದುರ್ಗದ ಬಳಿ ಈ ದುರ್ಘಟನೆ ನಡೆದಿದೆ.
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು - ಬಳ್ಳಾರಿ
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿ ದುರ್ಗದ ಬಳಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು
ದಾವಣಗೆರೆ ಜಿಲ್ಲೆಯ ವಿನೋಬಾ ನಗರ ನಿವಾಸಿ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಉಚ್ಚಂಗಿ ದುರ್ಗದ ಕಡೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನ ತಲೆಗೆ ಭಾರೀ ಪ್ರಮಾಣದ ಪೆಟ್ಟು ಬಿದ್ದು ಅತೀವ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಸೀಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.