ಬಳ್ಳಾರಿ:ಜಿಲ್ಲೆಯ ಕುಡಿತಿನಿ ವ್ಯಾಪ್ತಿಯ ವೇಣಿ ವೀರಾಪುರ ಬಳಿ ನಿನ್ನೆ ಬೈಕ್ಗೆ ಅದಿರು ಸಾಗಣೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರನ ಮುಖವೇ ಎರಡು ಹೋಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕುರುಗೋಡು ತಾಲೂಕಿನ ವೇಣಿವೀರಾಪುರ ಗ್ರಾಮದ ಪ್ರವೇಶ ದ್ವಾರದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಗ್ರಾಮದ ನಿವಾಸಿ ರವಿಕುಮಾರ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಲಾರಿ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಲ್ಲದೆ ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಕೂಡ ಅತಿ ವೇಗವಾಗಿ ಬೈಕ್ ಚಲಾಯಿಸುತ್ತಿರುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗಾಗಿ ರವಿಕುಮಾರ ಸಹ ಆತನ ಸಹಚರನೊಂದಿಗೆ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದಿರಬಹುದೆಂಬ ಸಂಶಯವೂ ಇಲ್ಲಿನ ಜನರಲ್ಲಿದೆ.