ಬಳ್ಳಾರಿ : ನಿಯಂತ್ರಣ ತಪ್ಪಿ ಕ್ಯಾಂಟರ್ ಅಪಘಾತಕ್ಕೆ ಈಡಾಗಿ ಚಾಲಕನ ಬಲಗಾಲು ತುಂಡಾದ ಘಟನೆ ಸಿರಗುಪ್ಪ ತಾಲೂಕಿನ ಶಾನವಾಸಪುರ ಗ್ರಾಮದ ಹೊರಭಾಗದ ಹೆದ್ದಾರಿಯಲ್ಲಿ ನಡೆದಿದೆ.
ಹೆದ್ದಾರಿಯಲ್ಲಿ ಕ್ಯಾಂಟರ್ ಅಪಘಾತ ಅಮೀರ್ (35) ಅಪಘಾತಕ್ಕೆ ಒಳಗಾಗಿರುವ ವ್ಯಕ್ತಿಯಾಗಿದ್ದು, ಕೋಳಿಗಳ ನೀಡುವ ಆಹಾರವಾದ ಕೋಳಿ ನುಚ್ಚನ್ನು ಈ ವಾಹನದಲ್ಲಿ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಬಿಜೆಪಿ ಸಭೆಯ ಕರ್ತವ್ಯ ಮುಗಿಸಿ ತೆರಳುತ್ತಿದ್ದ ಹೆಡ್ ಕಾನ್ಸ್ಟೇಬಲ್ ಅಪಘಾತದಲ್ಲಿ ದುರ್ಮರಣ
ವಾಹನದಲ್ಲಿ ತಾಂತ್ರಿಕ ತೊಂದರೆಯಾಗಿ ನಿಯಂತ್ರಣ ತಪ್ಪಿ, ಅಪಘಾತ ಸಂಭವಿಸಿದ್ದು, ಅಮೀರ್ ತನ್ನ ಬಲಗಾಲನ್ನು ಕಳೆದುಕೊಂಡಿದ್ದಾರೆ. ಆ್ಯಂಬುಲೆನ್ಸ್ ಮೂಲಕ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಇದಾದ ನಂತರ ಸಿರುಗುಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಗಾಯಾಳುವನ್ನು ಕಳುಹಿಸಲಾಗಿದೆ. ಅಪಘಾತದ ಸುದ್ದಿ ತಿಳಿದ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.