ಬಳ್ಳಾರಿ:ಜಿಲ್ಲೆಯಲ್ಲಿ ದುರಂತವೊಂದು ನಡೆದಿದೆ. ಅಂತರ್ಜಾತಿ ಪ್ರೇಮ ವಿವಾಹಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿಂಗಮ್ಮ(26) ಹಾಗೂ ಗುರುರಾಜ (30) ಮೃತ ಪ್ರೇಮಿಗಳು. ನಿಂಗಮ್ಮ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದವರಾಗಿದ್ದು, ಗುರುರಾಜ ಹೂವಿನಹಡಗಲಿ ತಾಲೂಕಿನ ಚಿಲುಗೋಡ್ ಗ್ರಾಮದವನು. ಇಬ್ಬರ ಮಧ್ಯೆ ಕಾಲೇಜಿನಲ್ಲಿ ಓದುವ ಸಮಯದಲ್ಲಿ ಪರಸ್ಪರ ಪರಿಚಯವಾಗಿ, ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಜಾತಿ ಬೇರೆ ಬೇರೆ ಎಂಬ ಕಾರಣಕ್ಕೆ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗ್ತಿದೆ.