ಹೊಸಪೇಟೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹೀಗಾಗಿ ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಅವರು ಮಾಧ್ಯಮಗಳ ಮುಂದೆ ಗೊಂದಲ ಹೇಳಿಕೆಗಳನ್ನು ನೀಡಬಾರದು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಹೇಳಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಮಾತನಾಡಿದ ಅವರು, ನೆರೆ, ಪ್ರವಾಹ ಹಾಗೂ ಕೋವಿಡ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅಲ್ಲದೇ, ಉತ್ತರ ಕರ್ನಾಟಕ ಹಾಗೂ ಸಮಗ್ರ ಕರ್ನಾಟಕ ಜನರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ಸಂಪೂರ್ಣ ಅವಧಿಗಾಗಿ ಅವರನ್ನು ಜನರು ಆಯ್ಕೆ ಮಾಡಿದ್ದಾರೆ ಎಂದರು.