ಬಳ್ಳಾರಿ: ಮದುವೆಗೆಂದು ಪಡೆದಿದ್ದ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಬಳ್ಳಾರಿ: ಮದುವೆ ಸಾಲಕ್ಕೆ ಹೆದರಿ ವ್ಯಕ್ತಿ ನೇಣಿಗೆ ಶರಣು - ಬಳ್ಳಾರಿಯ ವಿಮ್ಸ್ ಆಸ್ಪತ್ರೆ
ಮದುವೆ ಸಾಲಕ್ಕೆ ಹೆದರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಮದುವೆ ಸಾಲಕ್ಕೆ ಹೆದರಿ ವ್ಯಕ್ತಿ ನೇಣಿಗೆ ಶರಣು
ನಗರದ ಕೌಲ್ ಬಜಾರ್ ಪ್ರದೇಶದ ಆಟೋ ಚಾಲಕ ಶೇಖ್ ಮಹಮ್ಮದ್ ಗೌಸ್ (23 ವರ್ಷ) ಮೃತ ವ್ಯಕ್ತಿ. ಮೇ 23 ರಂದು ಈತ ಮನೆಯಲ್ಲಿ ನೇಣು ಹಾಕಿಕೊಂಡಿದ್ದ. ನಂತರ ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಮದುವೆ ಸಾಲ ತೀರಿಸಲು ಆಗದೆ ಈತ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.