ಹೊಸಪೇಟೆ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಎರಹಳ್ಳಿ ಗ್ರಾಮದ ಮಂಜಪ್ಪ (55) ಮೃತ ವ್ಯಕ್ತಿ. ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಕುಟುಂಬಸಹಿತ ಬಂದಿದ್ದ ಮಂಜಪ್ಪ, ಸ್ನಾನಕ್ಕೆಂದು ಹೊಳೆಗೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರೇ ಹಡಗಲಿ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಪ್ರತ್ಯೇಕ ಘಟನೆ: ಇಬ್ಬರ ಸಾವು - Mylara Lingeshwara Temple
ಹೂವಿನಹಡಗಲಿ ತಾಲೂಕಿನ ಮೈಲಾರದ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಇನ್ನು, ಹೊಸಪೇಟೆ ತಾಲೂಕಿನ ಗರಗ ಗ್ರಾಮದಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆ ಶರಣಾಗಿದ್ದಾರೆ.
ಅನಾರೋಗ್ಯದಿಂದ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣು
ಹೊಸಪೇಟೆ ತಾಲೂಕಿನ ಗರಗ ಗ್ರಾಮದಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಲಿತಮ್ಮ (27) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆಯು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಎಷ್ಟೇ ಪ್ರಯತ್ನಿಸಿದರೂ ಆರೋಗ್ಯ ಚೇತರಿಸಿಕೊಳ್ಳದ್ದರಿಂದ ಜಿಗುಪ್ಸೆಗೊಂಡು ಕ್ರಿಮಿನಾಶಕ ಸೇವಿಸಿದ್ದಾಳೆ.ಕೂಡಲೇ ಅವರನ್ನು ಕೊಪ್ಪಳದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಕುರಿತು ಮರಿಯಮ್ಮನಹಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.