ಬಳ್ಳಾರಿ: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಹನುಮಾನ್ ಗೋಡಾನ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವಿಗೀಡಾಗಿದ್ದಾರೆ.
ನೀರು ತರಲು ಹೋದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು - ಬಳ್ಳಾರಿ ನಗರದ ಸಂಚಾರಿ ಪೊಲೀಸ್ ಠಾಣೆ
ನೀರು ತರಲು ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
accident
ಮೋಟಾರ್ ಸೈಕಲ್ ಹಿಂದೆ ಕುಳಿತುಕೊಂಡು ತಮ್ಮ ಹೋಟೆಲ್ ಕಡೆಯಿಂದ ನೀರು ತರಲು ಹೋಗುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಇಬ್ಬರು ಕೆಳಗೆ ಬಿದ್ದಿದ್ದು ಮಹಮ್ಮದ್ ರಫೀಕ್ (50) ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೈಕ್ ಚಾಲನೆ ಮಾಡುತ್ತಿದ್ದ ಹೈದರ್ ಕಾಲುಗಳಿಗೆ, ತಲೆ ಹಾಗೂ ಹಣೆಗೆ ಗಾಯಗಳಾಗಿವೆ. ಹೈದರ್ ವಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ತಿಳಿಸಿದ್ದಾರೆ. ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.