ಕರ್ನಾಟಕ

karnataka

ETV Bharat / state

ವಿಜಯನಗರದಲ್ಲಿ ಕೌಟುಂಬಿಕ ಕಲಹ.. ಕಟ್ಟಿಗೆಯಿಂದ ತಂದೆ ತಲೆಗೆ ಹೊಡೆದು ಕೊಲೆ ಮಾಡಿದ ಮಗ - Man died by his son at Vijayanagara

ವಿಜಯನಗರದ ಕೂಡ್ಲಿಗಿ ತಾಲೂಕಿನ ಕುದುರೆಡವು ಗ್ರಾಮದಲ್ಲಿ ತಂದೆ ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಆರೋಪಿ ನಾಗರಾಜ್
ಆರೋಪಿ ನಾಗರಾಜ್

By

Published : Sep 5, 2022, 8:04 PM IST

ವಿಜಯನಗರ: ಕೌಟುಂಬಿಕ ಕಲಹದಿಂದ ಸಿಟ್ಟಿಗೆದ್ದ ಮಗನೇ ತಂದೆ ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕೂಡ್ಲಿಗಿ ತಾಲೂಕಿನ ಕುದುರೆಡವು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ತಿಪ್ಪೇರುದ್ರಪ್ಪ (70) ಕೊಲೆಯಾದ ವ್ಯಕ್ತಿ. ಕೃತ್ಯವೆಸಗಿದ ಮಗ ನಾಗರಾಜ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿಪ್ಪೇರುದ್ರಪ್ಪ ಹಾಗೂ ನಾಗರಾಜ್ ನಡುವೆ ಕೌಟುಂಬಿಕ ಕಲಹವಿತ್ತು. ಭಾನುವಾರ ರಾತ್ರಿ ನಾಗರಾಜ್‌ ಊಟಕ್ಕೆ ಮನೆಗೆ ಬಂದಾಗ ತಂದೆ ಅವಹೇಳನ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ನಾಗರಾಜ್‌ ಕಟ್ಟಿಗೆಯಿಂದ ತಂದೆಯ ಹಣೆ, ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡಿದ್ದ ತಿಪ್ಪೇರುದ್ರಪ್ಪ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಗುಡೇಕೋಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್​ಪಿ, ಸಿಪಿಐ ಭೇಟಿ ನೀಡಿ ಪರಿಶೀಲಿಸಿದರು. ಗುಡೇಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಪತ್ನಿಯೊಂದಿಗೆ ಅನೈತಿಕ ಸಂಬಂಧವಿದ್ದ ಯುವಕನನ್ನು ಕೊಲೆಗೈದ ಪತಿ: ಬೈಕ್​ ಅಪಘಾತದಲ್ಲಿ ವ್ಯಕ್ತಿ ಸಾವು

ABOUT THE AUTHOR

...view details